ಜುಲೈ 1 ಪತ್ರಕರ್ತರ ದಿನಾಚರಣೆ ಅಂದು ಭಾರತದ ಪತ್ರಿಕಾ ರಂಗದ ದಿಕ್ಕನ್ನು ಬದಲಾಯಿಸಿದ, ಪತ್ರಿಕೋಧ್ಯಮಕ್ಕೆ ಹೊಸ ಭಾಶ್ಯೆ ಬರೆದ ಪಿ.ಸಾಯಿನಾಥ್ ರವರು ಬೆಂಗಳೂರಿಗೆ ಬಂದಿದ್ದರು. ಅವರು ಇಂಗ್ಲೀಷ್ ನಲ್ಲಿ ಬರೆದಿರುವ 'ಎವರಿ ಬಡಿ ಲವ್ಸ್ ದಿ ಡ್ರಾಟ್' ಪುಸ್ತಕವನ್ನು ಸೃಜನಶೀಲ ಬರಹಗಾರರಾದ ಜಿ.ಎನ್.ಮೋಹನ್ ಕನ್ನಡಕ್ಕೆ ಅನುವಾದಿಸಿದ್ದ 'ಬರ ಅಂದ್ರೆ ಎಲ್ಲರಿಗೂ ಇಷ್ಟ' ಪುಸ್ತಕ ಬೆಂಗಳೂರಿನ ಗಾಂಧಿ ಭವನದಲ್ಲಿ ಕಿಕ್ಕಿರಿ ಅಭಿಮಾನಿಗಳ ನಡುವೆ ಅಭನವ ಪ್ರಕಾಶನ ಬಿಡುಗೊಡೆಗೊಳಿತು. ಪುಸ್ತಕವನ್ನು ಬಿಡುಗಡೆಮಾಡಿದ ನಂತರ ಪಿ.ಸಾಯಿನಾಥ್ ರವರ ಕುರಿತಾದ 'ನ್ಯೂರೋ ಗೆಸ್ಟ್' ಸಾಕ್ಷಚಿತ್ರ ಪ್ರದರ್ಶನವಾಯಿತು. ಈ ಸಾಕ್ಷ ಚಿತ್ರವನ್ನು ನೋಡಿದಮೇಲಂತೂ ಪಿ.ಸಾಯಿನಾಥ್ ರ ಕೆಲಸದ ವೈಕರಿ ಅವರು ಬೆಳೆದು ಬಂದ ರೀತಿ ಮತ್ತು ದೇಶದ ದುಡಿಯುವ ವರ್ಗದ ಮೇಲೆ ಅದರಲ್ಲೂ ರೈತ ಸಮುದಾಯದ ಮೇಲೆ ಅವರಿಟ್ಟಿರುವ ಅಪಾರ ಶ್ರದ್ದೆ, ತಮ್ಮ ಬರಹಗಳ ಮೂಲಕ ರೈತ ಸಮುದಾಯದ ನೈಜ ಸಮಸ್ಯೆಗಳನ್ನು ಮತ್ತು ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾದ ಅಂಶಗಳನ್ನು ಪತ್ರಿಕೆಗಳಿಗೆ ಬರೆಯುತ್ತಲೇ ಅವರು ಬೆಳದರು, ಆಮೂಲಕ ಆಳುವ ಸರ್ಕಾರಗಳ ಬೇಜವಾಭ್ದಾರಿತನವನ್ನು ಬಯಲಿಗೆಳೆಯುತ್ತ ಜವಾಭ್ದಾರಿಗಳ ಬಗ್ಗೆ ಎಚ್ಚರಿಸಿಕೊಂಡು ಭಾರತದ ಪತ್ರಿಕೋಧ್ಯಮದಲ್ಲೇ ಒಂದು ವಿಭಿನ್ನ ದೃಷ್ಟಿಕೋನವನ್ನು ಕೊಡುವ ಮೂಲಕ ಯು ಪತ್ರಕರ್ತರನ್ನು ಗ್ರಾಮೀಣ ಬಡ ಜನರ ಬಳಿಗೆ ಸೆಳೆದವರು ಪಿ.ಸಾಯಿನಾಥ್.
ಇವರು ಮಾತನಾಡುತ್ತಾ ಜಾಗತೀಕರಣದ ಪರಿಣಾಮವಾಗಿ ಮಾಧ್ಯಮ ಉಧ್ಯಮವಾಗಿ ಬದಲಾಗಿದೆ, ಅಲ್ಲಿ ಎಲ್ಲರಿಗೂ ಲಾಭ ಮಾಡುವ ಉದ್ದೇಶ ಬಿಟ್ಟರೆ ಜನರ ಸಮಸ್ಯೆಗಳನ್ನು ಕುರಿತು ವರದಿಗಳನ್ನು ಮಾಡುವ ಯಾವ ಉದ್ದೇಶವೂ ಇಲ್ಲ. ಅದಕ್ಕಾಗಿಯೇ ದೇಶದ ಯಾವುದೇ ದೃಶ್ಯಮಾಧ್ಯಮವಾಗಲೀ ಅಥವಾ ಮುದ್ರಣ ಮಾಧ್ಯಮವಾಗಲೀ ಕೃಷಿ, ನಿರುದ್ಯೋಗದಂತಹ ವಿಷಯಗಳನ್ನು ಒರತುಪಡಿಸಿ ಎಲ್ಲಾ ವಿಚಾರಗಳಗೂ ಪ್ರತ್ತೇಕ ವರದಿಗಾರರನ್ನು ನೇಮಿಸಿರುತ್ತಾರೆ ಎಂದರು.
ನನಗೆ ಪಿ.ಸಾಯುನಾಥ್ ತುಂಬ ಇಷ್ಟವಾಗುವುದು ಅವರು ಯಾವುದೇ ಒಂದು ಸಮಸ್ಯೆಯನ್ನು ನೋಡುವ ರೀತಿ ಮತ್ತು ಅದರ ಮೂಲಕ ಸಮಸ್ಯೆಯ ಆಳಕ್ಕಿಳಿದು ಅದನ್ನು ಪ್ರತ್ಯಕ್ಷವಾಗಿ ಕಂಡು ಅದನ್ನು ಧಾಖಲಿಸುವ ವಿಧಾನ ಮತ್ತು ಅವರು ಸಮಾಜದ ಎರಡು ತುದಿಗಳಲ್ಲಿ ನಡೆದಿರುವ ಘಟನೆಗಳನ್ನು ಆದರಿಸಿ ಅವುಗಳ ವೈರುಧ್ಯವನ್ನು ಬಹಳ ಸೊಗಸಾಗಿ ವಿವರಿಸುತ್ತಾರೆ ಉದಾಹರಣೆಗೆ ಅವರು ಯಾವಾಗಳೂ ಮಾತನಾಡುವಹಾಗೆ ಮಹಾರಷ್ಟ್ರದ ರಾಜಧಾನಿ ಬಾಂಬೆಯಲ್ಲಿ ಕಾಟನ್ ಬಟ್ಟೆ ಕುರಿತು ಲ್ಯಾಕ್ಮಿ ಕಂಪನಿಯಿಂದ ಫ್ಯಾಷನ್ ಶೋ ಆಯೋಜಿಸಲಾಗಿತ್ತು ಅದನ್ನು ವರದಿಮಾಡಲೆಂದು ದೇಶ-ವಿದೇಶಗಳಿಂದ 200 ಕ್ಕೂ ಹೆಚ್ಚು ಪತ್ರಕರ್ತರು, ಚಾಯಾಚಿತ್ರಗಾರರು ನಾಮುಂದು ತಾಮುಂದು ಎಂದು ಮುಗಿಬೀಳುತ್ತಿದ್ದರು. ಆದರೆ ಅದೇ ರಾಜ್ಯದ ಫ್ಯಾಶನ್ ಶೋ ನಡೆಯುವ 300 ಕಿ.ಮಿ ದೂರದಲ್ಲಿ ರುವ ವಿದರ್ಬಾದಲ್ಲಿ ರೈತರು ಅತ್ತಿ ಬೆಳೆದು ಬೆಲೆಸಿಗದೆ ಸಾಲಮಾಡಿ ಆತ್ಮಹತ್ಯೆಮಾಡಿಕೊಂಡಿದ್ದರೆ ಅದನ್ನು ವರದಿಮಾಡಲು ಕೇವಲ 5 ಜನ ಪತ್ರಕರ್ತರಿದ್ದರಂತೆ. ಅಂದರೆ ಭಾರತದ ಪತ್ರಿಕೋಧ್ಯಮದ ಆಧ್ಯತೆ ಏನೆಂದು ಕೊತ್ತಾತಿತ್ತಲ್ಲ. ಇದನ್ನು ಸಮಾಜದ ಮುಂದೆ ಅಂಕಿಸಂಖ್ಯೆ ಸಮೇತ ಸಾದರಪಡಿಸುವುದರಲ್ಲಿ ಸಾಯಿನಾಥ್ ಎಲ್ಲರಿಗೂ ಮಾದರಿಯಾಗಿದ್ದಾರೆ.
ಫೋಟೋ ತುಂಬಾ ಚೆನ್ನಾಗಿದೆ. ಅಭಿನಂದನೆಗಳು. ಎಸ್. ವ್ಯೆ. ಜಿ
ReplyDelete